‘ಪ್ರಧಾನಿ ನರೇಂದ್ರ ಮೋದಿ ಅವರಂಥ ನಾಯಕತ್ವದ ಅಗತ್ಯ ಜಗತ್ತಿಗೆ ಇದೆ’ ಅಂತಾ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ ಕಾರ್ಯ ನಿರ್ವಾಹಕ ಎರಿಕ್ ಸೊಲ್ಹಿಮ್ ಅಭಿಪ್ರಾಯಪಟ್ಟಿದ್ದಾರೆ.
ವಿಶ್ವಸಂಸ್ಥೆಯ ಅಂತ್ಯಂತ ಪ್ರತಿಷ್ಠಿತ ಪುರಸ್ಕಾರವಾದ ಚಾಂಪಿಯನ್ಸ್ ಆಫ್ ದಿ ಅರ್ಥ್ ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿಗೆ ನೀಡಲಾಯಿತು. ನವದೆಹಲಿಯ ಪ್ರವಾಸಿ ಭಾರತೀಯ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ, ವಿಶ್ವಸಂಸ್ಥೆ ಕಾರ್ಯದರ್ಶಿ ಅಂಟಾನಿಯೋ ಗುಟೆರೆಸ್ ಪ್ರಶಸ್ತಿ ಪ್ರದಾನ ಮಾಡಿದರು.
ಈ ವೇಳೆ ಯುಎನ್ಇಪಿ ಎಕ್ಸಿಕ್ಯೂಟೀವ್ ಡೈರೆಕ್ಟರ್ ಎರಿಕ್ ಸೊಲ್ಹಿಮ್ ಕೂಡ ಇದ್ದರು. ಕಾರ್ಯಕ್ರಮದಲ್ಲಿ ತಮಗಾದ ಅನುಭವ ಹಾಗೂ ಪ್ರಧಾನಿ ಮೋದಿ ಬಗ್ಗೆ ಟ್ವೀಟ್ ಮಾಡಿರುವ ಅವರು, ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆ ಭೂಮಿಗೆ ಗಂಡಾಂತರ ಉಂಟು ಮಾಡಲಿದೆ. ಇಂಥ ಅಪಾಯದ ಬಗ್ಗೆ ಈಗಾಗಲೇ ಹಲವು ನಾಯಕರು ಗುರುತಿಸಿದ್ದಾರೆ. ಆದರೆ ಭಾರತ ಹಾಗೂ ಪ್ರಧಾನಿ ಮೋದಿ ಅವರ ಅಗಾದ ಶಕ್ತಿ ಕೆಲಸ ಮಾಡುತ್ತಿದೆ. ನಮಗೆ ಈ ತರದ ನಾಯಕತ್ವದ ಅಗತ್ಯ ಇದೆ ಅಂತಾ ಟ್ವೀಟ್ ಮಾಡಿದ್ದಾರೆ.