ರಾಜ್ಯ ಸರ್ಕಾರ ಜಿಂದಾಲ್ ಸಂಸ್ಥೆಗೆ ಭೂಮಿ ನೀಡುತ್ತಿರುವುದನ್ನು ವಿರೋಧಿಸಿ ವಿನೂತನ ಪ್ರತಿಭಟನೆ ನಡೆಸಲಾಗಿದೆ.
ಮೈಸೂರಿನಲ್ಲಿ ವಾಟಳ್ ನಾಗರಾಜ್ ವಿನೂತನ ಪ್ರತಿಭಟನೆ ನಡೆಸಿದ್ದಾರೆ.
ರಸ್ತೆಯಲ್ಲಿ ಮಲಗಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನ ರೈಲ್ವೇ ನಿಲ್ದಾಣದ ವೃತ್ತದಲ್ಲಿ ಪ್ರತಿಭಟನೆ ಮಾಡಲಾಗಿದೆ.
ಕನ್ನಡ ಚಳುವಳಿ ವಾಟಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದಾರೆ. ಸಚಿವ ಸಂಪುಟದಲ್ಲಿ ಜಿಂದಾಲ್ ಸಂಸ್ಥೆಗೆ ಭೂಮಿ ನೀಡಲು ಸಮ್ಮತಿ ನೀಡಿದ ಹಿನ್ನೆಲೆ ಆಕ್ರೋಶ ಹೊರಹಾಕಿದ್ದಾರೆ.
ರೈತರ ಭೂಮಿ ಕಸಿದು ರಿಯಲ್ ಎಸ್ಟೇಟ್ ಸಂಸ್ಥೆಗೆ ನೀಡುತ್ತಿದ್ದಾರೆ. ಸಂಸ್ಥೆಯೊಂದಿಗೆ ರಾಜ್ಯ ಸರ್ಕಾರ ಭ್ರಷ್ಟಾಚಾರದ ಅವ್ಯವಹಾರ ನಡೆಸುತ್ತಿದೆ. 3660 ಕ್ಕೂ ಹೆಚ್ಚಿನ ಎಕರೆ ಭೂಮಿಯನ್ನು 1.45 ಲಕ್ಷಗಳಿಗೆ ನೀಡುವ ಮೂಲಕ ರಾಜ್ಯಕ್ಕೆ ಲಕ್ಷ ಕೋಟಿಗೆ ಹಣ ನಷ್ಟ ವಾಗಲಿದೆ ಎಂದು ಕಿಡಿಕಾರಿದ್ರು.
ರಾಜ್ಯವನ್ನು ಆರ್ಥಿಕ ದಿವಾಳಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಕೂಡಲೇ ರಾಜ್ಯ ಸರ್ಕಾರ ಆದೇಶವನ್ನು ಹಿಂಪಡೆಯ ಬೇಕು. ರೈತರ ಹಿತವನ್ನು ರಾಜ್ಯ ಸರ್ಕಾರ ಕಾಯಬೇಕು ಎಂದು ಮೈಸೂರಿನಲ್ಲಿ ವಾಟಾಳ್ ನಾಗರಾಜು ಹೇಳಿಕೆ ನೀಡಿದ್ದಾರೆ.