Publish Date: Mon, 12 Apr 2021 (11:21 IST)
Updated Date: Mon, 12 Apr 2021 (11:25 IST)
ಬೀದರ್ : ಲಾಕ್ ಡೌನ್ ಮಾಡುವ ಉದ್ದೇಶ ರಾಜ್ಯ ಸರ್ಕಾರಕ್ಕಿಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಲಾಕ್ ಡೌನ್ ಮಾಡಿದ್ರೆ ಜನರಿಗೆ ತೊಂದರೆ ಆಗುತ್ತೆ. ಲಾಕ್ ಡೌನ್ ನಿಂದಾಗುವ ತೊಂದರೆ ಬಗ್ಗೆ ಸರ್ಕಾರಕ್ಕೆ ಗೊತ್ತಿದೆ. ಕೊರೊನಾ ನಿಯಂತ್ರಿಸಲು ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ. ಕೊರೊನಾ ಚೈನ್ ಬ್ರೇಕ್ ಮಾಡಲು ಮನೆಯಲ್ಲೇ ಇರಬೇಕು. ಜನರು ಸರ್ಕಾರದ ಗೈಡ್ ಲೈನ್ಸ್ ಗೆ ಸಹಕರಿಸಬೇಕು.ಜನ ಸಹಕರಿಸದಿದ್ರೆ ಲಾಕ್ ಡೌನ್ ಅನಿವಾರ್ಯ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಸರ್ವಪಕ್ಷ ಸಭೆ ಕರೆದು ಲಾಕ್ ಡೌನ್ ಬಗ್ಗೆ ನಿರ್ಧಾರ ಮಾಡುತ್ತೇವೆ. ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಲಾಕ್ ಡೌನ್ ಅಗತ್ಯವಿಲ್ಲ ಎಂದು ತಜ್ಞರು ಹೇಳಿದ್ದಾರೆ. ವಿಪಕ್ಷದವರು ಯಾವುದೇ ಸಲಹೆ ನೀಡಿದರೂ ಸ್ವೀಕರಿಸಲಿದ್ದೇವೆ ಎಂದು ಅವರು ತಿಳಿಸಿದ್ದಾರೆ.