ಬೆಂಗಳೂರು : ಪ್ರವಾಹ ಪೀಡಿತ ಪ್ರದೇಶಗಳ ಪುನಶ್ಚೇತನಕ್ಕೆ ನೆರವಾಗುವ ದಾನಿಗಳ ಹೆಸರನ್ನು ಗ್ರಾಮಕ್ಕೆ ಇಡುವ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಯಡಿಯೂರಪ್ಪ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳ ಪುನಶ್ಚೇತನಕ್ಕೆ 10 ಕೋಟಿ ರೂ.ಗಳನ್ನು ನೀಡುವ ದಾನಿಗಳ ಹೆಸರನ್ನು ಗ್ರಾಮಕ್ಕೆ ಇಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಹೇಳಿದ್ದರು. ಇದಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ.
ಆದಕಾರಣ ಇದಕ್ಕೆ ಸ್ಪಷ್ಟನೆ ನೀಡಿದ ಸಿಎಂ ಪ್ರವಾಹ ಪೀಡಿತ ಗ್ರಾಮಗಳ ಅಭಿವೃದ್ಧಿಗಾಗಿ 10 ಕೋಟಿ ರೂ. ಹೆಚ್ಚು ನೆರವು ನೀಡುವ ಸಂಸ್ಥೆಗಳ ಹೆಸರನ್ನು ಅಲ್ಲಿ ನಿರ್ಮಿಸಲಾಗುವ ನೂತನ ಬಡಾವಣೆಗಳಿಗೆ ಇಡಲಾಗುವುದು. ಗ್ರಾಮದ ಹೆಸರನ್ನು ಬದಲಾಯಿಸುವ ಪ್ರಸ್ತಾಪವಿಲ್ಲ ಎಂದು ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ.