ಬೆಂಗಳೂರು: ಹುಬ್ಬಳ್ಳಿಯ ಕೆಎಲ್ ಇ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ಕೇಸ್ ಗೆ ಸಂಬಂಧಪಟ್ಟಂತೆ ಇದೀಗ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೆಲವು ಸ್ಪಷ್ಟನೆಗಳನ್ನು ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಕಾನೂನು ಪ್ರಕ್ರಿಯೆಗಳ ಬಗ್ಗೆ ಚರ್ಚಿಸಬೇಕಿದ್ದರಿಂದ ಹಿನ್ನಲೆ ಬಾಂಡ್ ಬರೆಸಿಕೊಂಡು ವಿದ್ಯಾರ್ಥಿಗಳನ್ನು ಬಿಟ್ಟು ಕಳುಹಿಸಿದ್ರು ಎಂದು ಹೇಳಿದ್ದಾರೆ.
ಈ ಬಗ್ಗೆ ವರದಿ ನೀಡುವಂತೆ ಡಿಜಿ ಮತ್ತು ಐಜಿಪಿ ಹು-ಧಾ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ದೇಶದ್ರೋಹ ಅಪರಾಧ, ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಅವರು ತಿಳಿಸಿದ್ದಾರೆ.