Publish Date: Sat, 08 Dec 2018 (16:30 IST)
Updated Date: Sat, 08 Dec 2018 (16:38 IST)
ಲೈಂಗಿಕ ಕಾರ್ಮಿಕರ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಸಂಘಟನೆ ವತಿಯಿಂದ ರಾಜಧಾನಿಯಲ್ಲಿ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ತುಳಸಿ ಪಾರ್ಕ್ ನಿಂದ ಪುರಭವನದವರೆಗೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಡಿ.9ರಂದು ಲೈಂಗಿಕ ಕಾರ್ಮಿಕರ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಸಂಘಟನೆ ವತಿಯಿಂದ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿದೆ.
ಪ್ರತಿವರ್ಷ ಸಂಘಟನೆ ವತಿಯಿಂದ ಸ್ವಾಭಿಮಾನಿ ಮೆರವಣಿಗೆ ಹಮ್ಮಿಕೊಳ್ಳಲಾಗುತ್ತಿದೆ. ಈ ವರ್ಷ ನಮ್ಮ ಸಂಘಟನೆಯ 11ನೇಯ ವಾರ್ಷಿಕೋತ್ಸವವಾಗಿದೆ. ಲೈಂಗಿಕ ಅಲ್ಪಸಂಖ್ಯಾತರು, ಲೈಂಗಿಕ ಕಾರ್ಮಿಕರು ಸರ್ಕಾರದಿಂದ ಯಾವುದೇ ಸೌಲಭ್ಯವಿಲ್ಲದೆ ಶೋಷಣೆಗೆ ಒಳಗಾಗುತ್ತಿದ್ದಾರೆ. ಸರ್ಕಾರ ಆದಷ್ಟು ಬೇಗ ಲೈಂಗಿಕ ಕಾರ್ಯಕರ್ತರ ಭಾವನೆಗಳನ್ನು ಅರ್ಥ ಮಾಡಿಕೊಂಡು ಅವರ ಸಮಸ್ಯೆ ಆದಷ್ಟು ಬೇಗ ಪರಿಹರಿಸಬೇಕು ಎಂದು ಸಂಘಟನೆಯ ರಿಯಾನ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಸರಕಾರದ ಗಮನವನ್ನು ಜಾಥಾ ಮೂಲಕ ಸೆಳೆಯಲಾಗುತ್ತದೆ ಎಂದು ಅವರು ತಿಳಿಸಿದರು.