ಚಾಮರಾಜನಗರ : ತಂದೆ ಮತ್ತು ಸಹೋದರ ಸೇರಿ 24 ವರ್ಷದ ಯುವತಿಯ ನಾಲ್ಕು ಬೆರಳುಗಳನ್ನು ಕತ್ತರಿಸಿದ ಘಟನೆ ಚಾಮರಾಜ್ ನಗರದ ಹನೂರ್ ತಾಲೂಕಿನ ಪಿಜಿ ಪಲ್ಮಾಗ್ರಾಮದಲ್ಲಿ ನಡೆದಿದೆ.
ಸಂತ್ರಸ್ತ ಯುವತಿ ಸತ್ಯ ಎನ್ನುವ ಹುಡುಗನನ್ನು ಪ್ರೀತಿಸುತ್ತಿದ್ದು, ಅವನನ್ನೇ ಮದುವೆಯಾಗುವುದಾಗಿ ತನ್ನ ಮನೆಯವರಿಗೆ ತಿಳಿಸಿದ್ದಾಳೆ. ಈ ಮದುವೆಗೆ ಆಕ್ಷೇಪ ವ್ಯಕ್ತಪಡಿಸಿದ ಯುವತಿಯ ತಂದೆ ಹಾಗೂ ಸಹೋದರ ಕೋಪದಿಂದ ಆಕೆಯ ನಾಲ್ಕು ಬೆರಳುಗಳನ್ನು ಕತ್ತರಿಸಿದ್ದಾರೆ. ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.