Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ದೇವೇಗೌಡ್ರ ಮನೆಯಲ್ಲಿ ತಡರಾತ್ರಿ ನಡೆದ ಸಭೆಯಲ್ಲಿ ಏನಾಯ್ತು?

ದೇವೇಗೌಡ್ರ ಮನೆಯಲ್ಲಿ ತಡರಾತ್ರಿ ನಡೆದ ಸಭೆಯಲ್ಲಿ ಏನಾಯ್ತು?
ಬೆಂಗಳೂರು , ಭಾನುವಾರ, 17 ಮಾರ್ಚ್ 2019 (15:02 IST)
ತುಮಕೂರು ಲೋಕಸಭಾ ಚುನಾವಣಾ ಕಣಕ್ಕಿಳಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್  ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದ್ದು, ತುಮಕೂರು ಕಾಂಗ್ರೆಸ್ ಕೈ ತಪ್ಪುವ ಸಾಧ್ಯತೆ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಮ್ಮ ಪಕ್ಷದ ನಾಯಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತುಮಕೂರು ಕಾಂಗ್ರೆಸ್ ಗೆ ಬಿಟ್ಟುಕೊಡಬೇಕು ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ ಪಟ್ಟು ಹಿಡಿದಿದ್ದು, ಕೊನೆಯ ಪ್ರಯತ್ನವಾಗಿ ಹಾಲಿ ಸಂಸದ ಮುದ್ದಹುನುಮೇ ಗೌಡರನ್ನು ದೆಹಲಿಗೆ ಕಳುಹಿಸಿ ಕೊಡಲಾಗಿದೆ. ಈ ವೇಳೆ ತುಮಕೂರು ಮತಕ್ಷೇತ್ರದಿಂದ ಕಾಂಗ್ರೆಸ್ ಸ್ಪರ್ಧೆ ಕುರಿತು ಪಕ್ಷದ ಹೈಕಮಾಂಡ್ ಜೊತೆ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ.

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದ ಮುದ್ದಹನುಮೇಗೌಡರು ತುಮಕೂರು ಹಾಗೂ ಬೆಂಗಳೂರು ಉತ್ತರ ಕ್ಷೇತ್ರ ಕುರಿತು ಗಂಭೀರ ಚರ್ಚೆ ನಡೆಸಿದ್ದರು. ಆದರೆ ಯಾವುದೇ ಸಕಾರಾತ್ಮಕ ಪರಿಣಾಮ ಬಾರದ ಕಾರಣ ತುಮಕೂರು ಮರಳಿ ಸಿಗುವ ಸಾಧ್ಯತೆ ಕಡಿಮೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಪರಮೇಶ್ವರ್ ಮುನಿಸಿಕೊಂಡಿದ್ದಾರೆ.

ಈ ಮಧ್ಯೆ ಜಿ.ಪರಮೇಶ್ವರ್ ಅವರ ಮನವೊಲಿಕೆಗೆ ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹಾಗೂ ಇತರ ಕೈ ನಾಯಕರು ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿ ಸಂಸದ ಮುದ್ದಹನುಮೇಗೌಡರಿಗೆ ಸೂಕ್ತ ಸ್ಥಾನಮಾನ ಕೊಡುವುದಾಗಿ ಭರವಸೆ ನೀಡಿದ್ದಾರೆ.

ಇತ್ತ ದೇವೇಗೌಡರ ನಿವಾಸದಲ್ಲಿ ನಿನ್ನೆ ರಾತ್ರಿ 1 ರಿಂದ 3.30ರ ವರೆಗೆ ಹೆಚ್.ಡಿ. ದೇವೇಗೌಡ, ಸಿಎಂ ಕುಮಾರಸ್ವಾಮಿ, ಎಚ್.ಡಿ.ರೇವಣ್ಣ ಅವರು ಸಭೆ ನಡೆಸಿದ್ದು, ತುಮಕೂರು ಕ್ಷೇತ್ರದಿಂದ ದೇವೇಗೌಡರೇ ಸ್ಪರ್ಧಿಸಲು ಚಿಂತನೆ ನಡೆಸಲಾಗಿದೆ.

ಜೆಡಿಎಸ್, ತುಮಕೂರು ಲೋಕಸಭಾ ಕ್ಷೇತ್ರವನ್ನು ಕೈಗೆ ಬಿಟ್ಟು ಕೊಡುವ ಸಾಧ್ಯತೆ ಕಡಿಮೆ ಇದ್ದು, ದೇವೇಗೌಡರು ಸ್ಪರ್ಧೆಯಿಂದ ದೂರ ಉಳಿದರೆ ಕ್ಷೇತ್ರವನ್ನು ಕಾಂಗ್ರೆಸ್​ಗೆ ಬಿಟ್ಟುಕೊಡುವ ಅನಿವಾರ್ಯತೆ ಬಂದೋದಗಲಿದೆ. ಒಂದು ವೇಳೆ ತುಮಕೂರು ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟು ಕೊಟ್ಟಲ್ಲಿ ಜೆಡಿಎಸ್​ ಕ್ಷೇತ್ರ 8 ರಿಂದ 7ಕ್ಕೆ ಇಳಿಯಲಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ನಿಖಿಲ್ ಕುಮಾರಸ್ವಾಮಿಗೆ ಬೆಂಬಲ ಸೂಚಿಸಿದ ಕಾಂಗ್ರೆಸ್ ನ ಹಿರಿಯ ಮುಖಂಡ ಜಿ.ಮಾದೇಗೌಡ