ದೇಶದಲ್ಲಿನ ಕಲ್ಲಿದ್ದಲು ಮತ್ತು ವಿದ್ಯುತ್ ಕೊರತೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿದ ನಂತರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಿಸಿದ್ದು, ದೇಶದಲ್ಲಿ ಕೇವಲ 8 ದಿನಗಳಿಗಾಗುವಷ್ಟು ಕಲ್ಲಿದ್ದಲು ದಾಸ್ತಾನು ಇದ್ದಿರುವುದಾಗಿ ತಿಳಿಸಿದ್ದಾರೆ. ಕಳೆದ ಎಂಟು ವರ್ಷಗಳಿಂದ ದೊಡ್ಡ, ದೊಡ್ಡ ಮಾತುಗಳನ್ನಾಡಿರುವ ಪರಿಣಾಮ ಇದೀಗ ಭಾರತದಲ್ಲಿ ಕೇವಲ 8 ದಿನಗಳಿಗಾಗುವಷ್ಟು ಮಾತ್ರ ಕಲ್ಲಿದ್ದಲು ದಾಸ್ತಾನು" ಇದ್ದಿರುವುದಾಗಿ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ಪ್ರತಿಕಾರದ ಬುಲ್ಡೋಜರ್ ಕಾರ್ಯಾಚರಣೆ ನಿಲ್ಲಿಸಬೇಕು, ಜತೆಗೆ ವಿದ್ಯುತ್ ಘಟಕಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸಣ್ಣ ಕೈಗಾರಿಕೆಗಳು ನಷ್ಟದಿಂದ ಮುಚ್ಚುವುದನ್ನು ತಡೆಯಬೇಕು ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.