Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮೋದಿಗೆ ಚುನಾವಣಾ ಪ್ರಚಾರವೇ ಮುಖ್ಯವಾಗಿದೆ: ಗುಂಡೂರಾವ್

ಮೋದಿಗೆ ಚುನಾವಣಾ ಪ್ರಚಾರವೇ ಮುಖ್ಯವಾಗಿದೆ: ಗುಂಡೂರಾವ್
ಬೆಂಗಳೂರು , ಶುಕ್ರವಾರ, 25 ಫೆಬ್ರವರಿ 2022 (14:21 IST)
ಬೆಂಗಳೂರು : ಉಕ್ರೇನ್ನಲ್ಲಿ ರಾಜ್ಯದ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 20 ಸಾವಿರ ಭಾರತೀಯರು ಸಿಲುಕಿಕೊಂಡಿದ್ದಾರೆ.
 
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ, ಭಾರತೀಯರ ರಕ್ಷಣೆಗಿಂತ ಉತ್ತರ ಪ್ರದೇಶ ಚುನಾವಣಾ ಪ್ರಚಾರವೇ ಮುಖ್ಯವಾಗಿದೆ ಎಂದು ಶಾಸಕ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

ಯುದ್ಧಪೀಡಿತ ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರು ದೇಶಕ್ಕೆ ಮರಳಲಾಗದೆ ನರಳುತ್ತಿದ್ದಾರೆ. ಆದರೆ ಪ್ರಧಾನಿ ಮೋದಿಯವರಿಗೆ ಭಾರತೀಯರ ರಕ್ಷಣೆಗಿಂತ ಉತ್ತರ ಪ್ರದೇಶ ಚುನಾವಣಾ ಪ್ರಚಾರವೇ ಮುಖ್ಯವಾಗಿದೆ.

ಮೋದಿಯವರೆ ಚುನಾವಣಾ ದಾಹ ಬಿಡಿ. ಚುನಾವಣೆ ಬರುತ್ತದೆ ಹೋಗುತ್ತದೆ. ಉಕ್ರೇನ್ನಲ್ಲಿರುವ ಭಾರತೀಯರ ರಕ್ಷಣೆಗೆ ಸ್ವಲ್ಪವಾದರೂ ಮನಸ್ಸು ಮಾಡಿ ಎಂದು ಟ್ವೀಟ್ ಮೂಲಕ ಶಾಸಕ ದಿನೇಶ್ ಗುಂಡೂರಾವ್ ಒತ್ತಾಯ ಮಾಡಿದ್ದಾರೆ.

ಉಕ್ರೇನ್ ಹಾಗೂ ರಷ್ಯಾ ಯುದ್ದ ಸಂಘರ್ಷದಿಂದ ಉಕ್ರೇನ್ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಕ್ಕೆ ಸರ್ಕಾರ ವೆಬ್ ಪೋರ್ಟಲ್ ಪ್ರಾರಂಭಿಸಿದೆ. http://ukraine.karnataka.tech/stranded  ಈ ವೆಬ್ ಪೋರ್ಟಲ್ ಮೂಲಕ ಮಾಹಿತಿಗಳನ್ನ ಅಪ್ ಲೋಡ್ ಮಾಡಬಹುದಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬದಲಾದ ಬೇಸಿಗೆ ರಜೆ, ‘ಹೊಸ ಶೈಕ್ಷಣಿಕ ವರ್ಷ’ ಬೇಗ ಆರಂಭ