ಹಾಸನ
ಹಾಸನದ ಗೊರೂರಿನಲ್ಲಿ ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದು, ಮಳೆಯಿಂದಾಗಿರುವ ನಷ್ಟಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ನಾಳೆಯಿಂದಶಿರಾಡಿಘಾಟ್ ರಸ್ತೆ ಸಂಚಾರಕ್ಕೆ ಮುಕ್ತವಾಗಲಿದೆ. ಉಳಿದ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಬಿಳಿಕೆರೆ-ಬೇಲೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಆರಂಭವಾಗಲಿದೆ ಎಂದೂ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ.