ಬೆಂಗಳೂರು: ವಾಲ್ಮೀಕಿ ಹಗರಣ ವಿಚಾರವಾಗಿ ಬಂಧಿತರಾಗಿದ್ದ ಮಾಜಿ ಸಚಿವ ನಾಗೇಂದ್ರ ನಿನ್ನೆಯಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಬಿಡುಗಡೆಯಾದ ತಕ್ಷಣ ಅವರು ಮಾಡಿದ ಕೆಲಸವೇನು ಗೊತ್ತಾ?
ನಿನ್ನೆ ಜೈಲಿನಿಂದ ಬಿಡುಗಡೆಯಾದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ್ದ ನಾಗೇಂದ್ರ ಇದೆಲ್ಲಾ ಬಿಜೆಪಿಯ ಪಿತೂರಿ. ವಾಲ್ಮೀಕಿ ಹಗರಣದಲ್ಲಿ ಸಿಎಂ, ಡಿಸಿಎಂ ಹೆಸರು ಹೇಳುವಂತೆ ಇಡಿ ಅಧಿಕಾರಿಗಳು ನನಗೆ ಒತ್ತಡ ಹಾಕಿದ್ದರು ಎಂದೆಲ್ಲಾ ಹಲವು ಆರೋಪಗಳನ್ನು ಮಾಡಿದ್ದರು.
ಜೈಲಿನಿಂದ ಬಿಡುಗಡೆಯಾದ ಮೇಲೆ ಅವರಿಗೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಜೊತೆಯಾಗಿದ್ದರು. ಮಾಧ್ಯಮಗಳ ಮುಂದೆ ನಾಗೇಂದ್ರಗೆ ಜಮೀರ್ ಅಹ್ಮದ್ ಬೆಂಬಲ ಘೋಷಿಸುತ್ತಿದ್ದಂತೇ ಅವರ ಅಭಿಮಾನಿಗಳು ಜೈಕಾರ ಕೂಗಿದ್ದರು.
ಈ ನಡುವೆ ಜೈಲಿನಿಂದ ರಿಲೀಸ್ ಆದ ತಕ್ಷಣ ನಾಗೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಜಾಮೀನಿನ ಮೇಲೆ ಬಿಡುಗಡೆಗೊಂಡ ಮಾಜಿ ಸಚಿವ ನಾಗೇಂದ್ರ ಅವರು ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಸಚಿವರಾದ ಜಮೀರ್ ಅಹಮದ್ ಖಾನ್ ಅವರು ಜೊತೆಗಿದ್ದರು.