Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಇಂದು ನಡೆಯಲಿರುವ ಏಳನೇ ಪಂದ್ಯದಲ್ಲಿ ಕೆಎಲ್ ರಾಹುಲ್ ನಾಯಕತ್ವದ ಲಖನೌ ಸೂಪರ್ ಜೇಂಟ್ಸ್ ಮತ್ತು ರವೀಂದ್ರ ಜಡೇಜಾ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಸೆಣೆಸಾಟ ನಡೆಸಲಿವೆ. ಉಭಯ ತಂಡಗಳು ಕೂಡ ಆಡಿದ ಮೊದಲ ಪಂದ್ಯದಲ್ಲಿ ಸೋಲು ಕಂಡಿದ್ದು ಗೆಲುವಿನ ಖಾತೆ ತೆರೆಯುವುದು ಉಭಯ ತಂಡಗಳಿಗೆ ಅನಿವಾರ್ಯವಾಗಿದೆ. ಐಪಿಎಲ್ 2022ರ ಮೊದಲ ಪಂದ್ಯದಲ್ಲಿ ಸಿಎಸ್ಕೆ ವಿರುದ್ಧ ಕೆಕೆಆರ್ 6 ವಿಕೆಟ್ಗಳಿಂದ ಗೆದ್ದರೆ ಗುಜರಾತ್ ಟೈಟಾನ್ಸ್ ವಿರುದ್ಧ ಲಖನೌ ಸೋಲುಂಡಿತ್ತು. ಸೋಲಿನೊಂದಿಗೆ ಟೂರ್ನಿ ಆರಂಭಿಸಿರುವ ಉಭಯ ತಂಡಗಳು ಇದೀಗ ಚೊಚ್ಚಲ ಗೆಲುವನ್ನು ಎದುರು ನೋಡುತ್ತಿವೆ. ಮುಂಬೈನ ಬ್ರಬೋರ್ನ್ ಸ್ಟೇಡಿಯಂ ಈ ಹೈವೋಲ್ಟೇಜ್ ಕದನಕ್ಕೆ ಸಾಕ್ಷಿಯಾಗಲಿದೆ.