Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪ್ರಜ್ವಲ್ ರೇವಣ್ಣ ಆಸ್ತಿ ಮೌಲ್ಯವೆಷ್ಟು, ಏನು ಓದಿದ್ದಾರೆ ಇಲ್ಲಿದೆ ಡೀಟೈಲ್ಸ್

Prajwal Revanna

Krishnaveni K

ಬೆಂಗಳೂರು , ಸೋಮವಾರ, 29 ಏಪ್ರಿಲ್ 2024 (09:20 IST)
Photo Courtesy: Twitter
ಬೆಂಗಳೂರು: ಹಾಸನ ಸಂಸದ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಈಗ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡಿದ್ದು ರಾಜ್ಯ ಸರ್ಕಾರ ಅವರ ವಿರುದ್ಧ ಎಸ್ ಐಟಿ ತನಿಖೆಗೆ ಆದೇಶಿಸಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಮನೆಕೆಲಸದಾಕೆಯೇ ದೂರು ಕೊಟ್ಟಿದ್ದಾಳೆ. ಹಲವು ಮಹಿಳೆಯರಿಗೆ ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಕೆಲವು ವಿಡಿಯೋ ತುಣುಕುಗಳು ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಅಷ್ಟಕ್ಕೂ ಪ್ರಜ್ವಲ್ ರೇವಣ್ಣ ಹಿನ್ನಲೆ ಏನು ನೋಡೋಣ. ಎಲ್ಲರಿಗೂ ಗೊತ್ತಿರುವ ಹಾಗೆ ಪ್ರಜ್ವಲ್ ರೇವಣ್ಣ ರಾಜಕೀಯ ಹಿನ್ನಲೆಯಿಂದಲೇ ಬಂದವರು. ದೇವೇಗೌಡರ ವಂಶದ ಕುಡಿ. ಮಾಜಿ ಸಚಿವ ಎಚ್ ಡಿ ರೇವಣ್ಣ-ಭವಾನಿ ರೇವಣ್ಣ ಪುತ್ರ. 1990 ರಲ್ಲಿ ಜನಿಸಿದ ಪ್ರಜ್ವಲ್ ಗೆ ಈಗ 33 ವರ್ಷ. ಇನ್ನೂ ಅವಿವಾಹಿತ. ವಿದ್ಯಾಭ್ಯಾಸದ ವಿಚಾರಕ್ಕೆ ಬಂದರೆ ಪ್ರಜ್ವಲ್ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮುಗಿಸಿದ್ದಾರೆ. ವಿದೇಶದಲ್ಲಿ ಎಂಟೆಕ್ ಮಾಡಲು ಹೋಗಿ ಅರ್ಧಕ್ಕೇ ಬಿಟ್ಟರು. ಬಳಿಕ ರಾಜಕೀಯಕ್ಕೆ ಸೇರಿಕೊಂಡರು.

ತಾತ ಎಚ್ ಡಿ ದೇವೇಗೌಡ ತಮ್ಮ ಸ್ವ ಕ್ಷೇತ್ರ ಹಾಸನವನ್ನು ಮೊಮ್ಮಗ ಪ್ರಜ್ವಲ್ ಗೆ ಬಿಟ್ಟುಕೊಟ್ಟರು. 2019 ರ ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಜೆಡಿಎಸ್ ಸಂಸದರಾಗಿ ಗೆದ್ದು ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದರು. ಕಳೆದ 8 ವರ್ಷಗಳಿಂದ ಜೆಡಿಎಸ್ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದಾರೆ.

ಇದೀಗ ಮತ್ತೊಮ್ಮೆ ಹಾಸನದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಈ ವೇಳೆ ಅವರ ಆಸ್ತಿ ಮೌಲ್ಯ ಘೋಷಣೆ ಮಾಡಿಕೊಂಡಿದ್ದಾರೆ. ಪ್ರಜ್ವಲ್ ಸುಮಾರು 40.84 ಕೋಟಿ ರೂ. ಆಸ್ತಿ ಹೊಂದಿದ್ದಾರೆ. ಅವರ ಬಳಿ 9.29 ಲಕ್ಷ ನಗದು, ಮೌಲ್ಯಯುತ ಆಸ್ತಿಗಳಿಗೆ ಒಡೆಯರಾಗಿದ್ದಾರೆ. 2019 ರ ಲೋಕಸಭೆ ಚುನಾವಣೆ ವೇಳೆ ತಮ್ಮ ಆಸ್ತಿ ಮೌಲ್ಯ 10 ಕೋಟಿ ರೂ. ಎಂದು ಘೋಷಿಸಿಕೊಂಡಿದ್ದರು. ಇದೀಗ 40 ಕೋಟಿ ರೂ.ಗೆ ಏರಿಕೆಯಾಗಿದೆ. ಹೊಳೆನರಸೀಪುರದಲ್ಲಿ ಕೃಷಿ ಭೂಮಿ, ಮೈಸೂರಿನಲ್ಲಿ ವಾಣಿಜ್ಯ ಮಳಿಗೆ, ನೆಲಮಂಗಲದಲ್ಲಿ ಕೃಷಿಯೇತರ ಭೂಮಿಗಳನ್ನು ಹೊಂದಿದ್ದಾರೆ. ಇದೀಗ ಲೈಂಗಿಕ ಹಗರಣದಲ್ಲಿ ಅವರ ಹೆಸರು ಕೇಳಿಬಂದಿದ್ದು, ಎಸ್ ಐಟಿ ತನಿಖೆಗೆ ಆದೇಶಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂಸದ, ಬಿಜೆಪಿ ಹಿರಿಯ ನಾಯಕ ವಿ ಶ್ರೀನಿವಾಸ್ ಪ್ರಸಾದ್ ನಿಧನ