Publish Date: Thu, 09 Feb 2023 (15:43 IST)
Updated Date: Thu, 09 Feb 2023 (16:00 IST)
ಮಾಜಿ ಸಿಎಂ ರಾಮಕೃಷ್ಣ ಹೆಗಡೆಯವರಿಗೆ ಕಲ್ಲು ಹೊಡೆದವರು ಯಾರು? ಅವರ ರಕ್ತದಲ್ಲೇ ಬ್ರಾಹ್ಮಣ ವಿರೋಧಿತನ ಇದೆ. ರಾಮಕೃಷ್ಣ ಹೆಗಡೆಯವರ ಕಾಲದಿಂದಲೇ ದಾಳಿ ಮಾಡುತ್ತಾ ಬಂದವರು. ಈಗ ಬಾಯಲ್ಲಿ ನೇರವಾಗಿ ಹೇಳಿದ್ದಾರೆ ಎಂದು ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹರಿಹಾಯ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮಾತನಾಡಿದ ಅವರು, ಇಷ್ಟು ದಿನ ಕಲ್ಲಲ್ಲಿ ಹೊಡೆಯುತ್ತಿದ್ದರು. ಬ್ರಾಹ್ಮಣ ಸಮುದಾಯವನ್ನ ಕೀಳಾಗಿ ನೋಡುವ, ಸಮುದಾಯಕ್ಕೆ ಅಪಮಾನ ಮಾಡುವ, ತುಚ್ಛವಾಗಿ ಕಾಣುವುದು ಒಬ್ಬ ಮಾಜಿ ಮುಖ್ಯಮಂತ್ರಿಗೆ ಶೋಭೆಯಲ್ಲ ಎಂದರು. ಎಚ್‌ಡಿಕೆ ಅವರಿಗೆ ಮೂರು ಜಿಲ್ಲೆಯಲ್ಲಷ್ಟೆ ಪ್ರಭಾವವಿದೆ. ಮತ್ತೆ ಸಿ.ಎಂ ಆಗುವ ಕನಸು ಹೊತ್ತು ತಿರುಗಾಡುತ್ತಿದ್ದಾರೆ. ಅಧಿಕಾರಕ್ಕೆ ಏರಲಾಗದು ಎಂಬುದು ಅರಿವಾಗುತ್ತಿದ್ದಂತೇ ಜಾತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿ ಕಾರಿದರು.