ಬೆಂಗಳೂರು : ಸಾರಿಗೆ ಸಚಿವ ಹೆಚ್.ಎಂ.ರೇವಣ್ಣ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಭಾರಿ ಅವ್ಯವಹಾರ ನಡೆಸಿದ್ದಾರೆ ಎಂದು ಅವರ ವಿರುದ್ದ ಎಸಿಬಿಗೆ ದೂರು ನೀಡಲಾಗಿದೆ.
ಹೆಚ್.ಎಂ.ರೇವಣ್ಣ ಅವರು ಸಾರಿಗೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೇವಲ ಆರೂವರೆ ತಿಂಗಳಲ್ಲಿ ಬಸ್ ಖರೀದಿ ಹಾಗೂ ಅವುಗಳ ನಿರ್ವಹಣೆಯಲ್ಲಿ 1600ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಸಚಿವರು ಹಾಗೂ ಐವರು ಎಎಎಸ್ ಅಧಿಕಾರಿಗಳ ವಿರುದ್ದ ಎಸಿಬಿಗೆ ದೂರು ನೀಡಿದ್ದಾರೆ. ಅದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಿಯಾದ ದಾಖಲೆಗಳನ್ನು ನೀಡುವಂತೆ ಎಸಿಬಿ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ