ಈ ಬಗ್ಗೆ ನಗರದ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,’ ಕಳೆದ ಕೆಲ ದಿನಗಳ ಹಿಂದೆ ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಬಿಜೆಪಿ ಕಾರ್ಯಕರ್ತ ರಾಜು ಕುಟುಂಬಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಬಿಎಸ್‍ವೈ, ಪ್ರತಾಪ್ ಸಿಂಹ 5 ಲಕ್ಷ ರೂ. ಪರಿಹಾರ ಕೊಟ್ಟು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಹಣ ನೀಡಿರುವ ಕುರಿತು ಮೃತ ಯುವಕ ರಾಜು ಅವರ ತಾಯಿಯೇ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಇದರ ವಿರುದ್ಧ ಕಾಂಗ್ರೆಸ್ ಶೀಘ್ರವೇ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುತ್ತದೆ’ ಎಂದು ತಿಳಿಸಿದ್ದಾರೆ.
‘ಅಮಿತ್ ಶಾ ರಾಜ್ಯಕ್ಕೆ ಬಂದು ಕ್ರಿಮಿನಲ್ ರೀತಿ ವರ್ತಿಸುತ್ತಿದ್ದಾರೆ. ಅವರು ರಾಜ್ಯಕ್ಕೆ ಬರುವುದವನ್ನು ನಿಲ್ಲಿಸಬೇಕು. ಅಮಿತ್ ಶಾ ಹಾಗೂ ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು ಇಬ್ಬರ ವಿರುದ್ಧವೂ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ. ರಾಜ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸುತ್ತಿರುವ ಅಮಿತ್ ಶಾ ಅವರನ್ನು ಗಡಿಪಾರು ಮಾಡಬೇಕು’ ಎಂದು ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ