Publish Date: Thu, 18 Oct 2018 (14:26 IST)
Updated Date: Thu, 18 Oct 2018 (14:28 IST)
ಮೈಸೂರು : ಇಂದು ಮೈಸೂರು ಅರಮನೆ ಸೇರಿದಂತೆ ನಾಡಿನಾದ್ಯಂತ ಆಯುಧ ಪೂಜೆ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಆದರೆ ಅರಮನೆಯಲ್ಲಿ ಪೂಜಾ ಕಾರ್ಯಕ್ರಮಗಳನ್ನು ಮುಂದೆ ನಿಂತು ನಡೆಸಬೇಕಾಗಿರುವ ರಾಜವಂಶಸ್ಥೆ ಪ್ರಮೋದಾದೇವಿ ಅವರು ಆಯುಧ ಪೂಜೆಯನ್ನು ಮೊಟಕುಗೊಳಿಸಿ ದಿಢೀರ್ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.
ಕಾರಣ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸಹೋದರಿಯಾದ ರಾಜವಂಶಸ್ಥೆ ವಿಶಾಲಾಕ್ಷಿ ದೇವಿಯವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ನಾದಿನಿ ಆರೋಗ್ಯ ವಿಚಾರಿಸಲು ಮೈಸೂರು ಅರಮನೆಯಿಂದ ಸಡನ್ ಆಗಿ ಪ್ರಮೋದಾದೇವಿ ಅವರು ಬೆಂಗಳೂರಿಗೆ ಪ್ರಯಾಣ ಕೈಗೊಂಡಿದ್ದಾರೆ.
ವಿಶಾಲಾಕ್ಷಿದೇವಿಯವರ ಅನಾರೋಗ್ಯದ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ದಸರಾ ಆಚರಣೆ ಮಾಡಲಾಗುತ್ತಿದೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.