Publish Date: Wed, 08 Aug 2018 (18:10 IST)
Updated Date: Wed, 08 Aug 2018 (18:14 IST)
ರಸ್ತೆ ಅಗಲೀಕರಣದ ಹೆಸರಲ್ಲಿ ಅಕ್ರಮವಾಗಿ ಮರಗಳ ಕಡಿದಿರುವ ಆರೋಪ ಕೇಳಿಬಂದಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಂಪ್ ಹೌಸ್ ಬಳಿ ಈ ಘಟನೆ ನಡೆದಿದೆ. ಮೈಸೂರು- ಕೆ.ಆರ್.ಎಸ್ ರಸ್ತೆ ಬದಿಯಲ್ಲಿದ್ದ ಸುಮಾರು 50 ಕ್ಕೂ ಹೆಚ್ಚು ಮರಗಳನ್ನ ಕಡಿಯಲಾಗಿದೆ. ಪೆಟ್ರೋಲ್ ಬಂಕ್, ಕಲ್ಯಾಣ ಮಂಟಪ ಹಾಗೂ ಡಾಬಾಗಳ ಮಾಲೀಕರಿಗೆ ಅನುಕೂಲ ಕಲ್ಪಿಸಲು ಅಧಿಕಾರಿಗಳು ಮರಗಳನ್ನು ನಾಶ ಮಾಡಿದ್ದಾರೆಂದು ಸ್ಥಳೀಯರು ಆರೋಪ ಮಾಡಿದ್ದಾರೆ.
ರಸ್ತೆ ಅಗಲೀಕರಣ ನೆಪದಲ್ಲಿ ಬೃಹತ್ ಮರಗಳು ನೆಲಕ್ಕೆ ಉರುಳಿರುವುದು ಪರಿಸರ ಪ್ರೇಮಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗುತ್ತಿದೆ.