Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಚಿತ್ರದುರ್ಗ: ಕೆಲಸಕ್ಕೆ ಹೋಗದೇ ಮನೆಯಲ್ಲಿದ್ದ ಗಂಡನ ಮೇಲೆ ಆಕ್ರೋಶಗೊಂಡಿದ್ದ ಪತ್ನಿ ಹೊಡೆದು ಕೊಲೆ ಮಾಡಿದ್ದಾಳೆ.
ಗಾರೆ ಕೆಲಸಕ್ಕೆ ಹೋಗುತ್ತಿದ್ದ ಗಂಡ ಅನಾರೋಗ್ಯದ ಕಾರಣದಿಂದ ಕೆಲಸಕ್ಕೆ ಹೋಗದೇ ಕೆಲ ಸಮಯದಿಂದ ಮನೆಯಲ್ಲೇ ಕಾಲ ಕಳೆಯುತ್ತಿದ್ದ. ಈ ಬಗ್ಗೆ ಹೆಂಡತಿ ಆಕ್ಷೇಪಿಸಿದ್ದಳು. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳವಾಗಿತ್ತು.
ಇದೇ ಆಕ್ರೋಶದಲ್ಲಿ ಬೆಳಗಿನ ಜಾವ ಬಾಯಿಗೆ ಬಟ್ಟೆ ತುರುಕಿ ಮರ್ಮಾಂಗಕ್ಕೆ ಹೊಡೆದು ಕೊಲೆ ಮಾಡಿದ್ದಾಳೆ. ಸಂಬಂಧಿಕರು ಮಹಿಳೆ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.