Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ರಾಮನಗರದ ಚನ್ನಪಟ್ಟಣದಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದೆ. ತಗಚಗೆರೆ ಗ್ರಾಮದಲ್ಲಿ ರೈತ ಮಹಾಲಿಂಗು ಎಂಬುವವರಿಗೆ ಸೇರಿದ ಜಮೀನಿನಲ್ಲಿ 100ಕ್ಕೂ ಹೆಚ್ಚು ತೆಂಗಿನ ಸಸಿ ನಾಶ ಮಾಡಿವೆ. ತಡರಾತ್ರಿ ತೆಂಗಿನ ತೋಟಕ್ಕೆ ನುಗ್ಗಿದ ಕಾಡಾನೆಗಳು ದಾಂಧಲೆ ನಡೆಸಿವೆ. ಕಾಡಾನೆ ದಾಳಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ರೈತರು ಒತ್ತಾಯಿಸಿದ್ದಾರೆ. ಕಾಡಾನೆಗಳ ದಾಳಿಯಿಂದ ಬೇಸತ್ತ ಅನ್ನದಾತರು, ಶಾಶ್ವತ ಪರಿಹಾರ ಕಲ್ಪಿಸುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.