Webdunia - Bharat's app for daily news and videos

Install App

ಸಿಬಿಎಫ್‌ಸಿ ಅನುಮತಿ ನೀಡಿದ್ರೆ ಪದ್ಮಾವತಿ ಚಿತ್ರ ಪ್ರದರ್ಶನಕ್ಕೆ ಅಸ್ತು: ಸಚಿವ ರಾಮಲಿಂಗಾ ರೆಡ್ಡಿ

Webdunia
ಗುರುವಾರ, 16 ನವೆಂಬರ್ 2017 (19:04 IST)
ಬಾಲಿವುಡ್ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶಿಸಿದ ಪದ್ಮಾವತಿ ಚಿತ್ರವನ್ನು ರಾಜ್ಯ ಸರ್ಕಾರ ನಿಷೇಧಿಸುವುದಿಲ್ಲ ಎಂದು ಗೃಹ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಪ್ರಶ್ನೆಗೆ ಉತ್ತರಿಸಿದ ಸಚಿವ ರೆಡ್ಡಿ, ಸಿಬಿಎಫ್‌ಸಿಯಿಂದ ಪ್ರಮಾಣ ಪತ್ರ ದೊರೆತಲ್ಲಿ ರಾಜ್ಯದಲ್ಲಿ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.
 
ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಸರಕಾರ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದರು.
 
ರಾಣಿ ಪದ್ಮಾವತಿ ಮತ್ತು ರಜಪೂತ ಸಮುದಾಯದವರು ಶೌರ್ಯ ಮತ್ತು ದೇಶಭಕ್ತಿಯ ಸಂಕೇತವೆಂದು ಗುರುತಿಸಲಾಗುತ್ತದೆ. .ಈ ಚಿತ್ರದಲ್ಲಿ ರಾಣಿ ಪದ್ಮಾವತಿಯ ತಪ್ಪಾದ ಚಿತ್ರಣವು ರಜಪೂತ್ ಸಮುದಾಯದ ಭಾವನೆಗಳನ್ನು ಗಾಯಗೊಳಿಸಿದೆ. ಭಾರತ ಸೇರಿದಂತೆ ರಾಜ್ಯದಾದ್ಯಂತ ಸಿನೆಮಾದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ರಾಜ್ಯದಲ್ಲಿ ಚಿತ್ರ ಬಿಡುಗಡೆಗೆ ಅನುಮತಿ ನೀಡಬಾರದು ಎಂದು ಬಿಜೆಪಿ ಮುಖಂಡ ಲೆಹರ್ ಸಿಂಗ್ ಸರಕಾರವನ್ನು ಒತ್ತಾಯಿಸಿದ್ದಾರೆ. 
 
ಚಿತ್ರದಲ್ಲಿರುವ ವಿಷಯಗಳ ಬಗ್ಗೆ ತಾನು ತಿಳಿದಿಲ್ಲವೆಂದು ಮತ್ತು ಈ ಅಂಶಗಳ ಬಗ್ಗೆ ಗಮನಹರಿಸಲು ಸಿಬಿಎಫ್ಸಿಯ ಜವಾಬ್ದಾರಿ ಎಂದು ರೆಡ್ಡಿ ಹೇಳಿಕೆ ನೀಡಿದ್ದಾರೆ.
 
ಪದ್ಮಾವತಿ ಚಿತ್ರದಲ್ಲಿರುವ ವಿಷಯದ ಬಗ್ಗೆ ನನಗೆ ಮಾಹಿತಿಯಿಲ್ಲ. ಇಂತಹ ವಿಷಯಗಳ ಬಗ್ಗೆ ಗಮನಹರಿಸುವುದು ಸಿಬಿಎಫ್‌ಸಿಗೆ ಬಿಟ್ಟ ಹೊಣೆಯಾಗಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments