ಬೆಂಗಳೂರು: ಐಟಿ ದಾಳಿಯಲ್ಲಿ ಸಿಲುಕಿಕೊಂಡಿರುವ ಸಚಿವ ಡಿಕೆ ಶಿವಕುಮಾರ್ ಇದೀಗ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಯಿದೆ ಎನ್ನಲಾಗಿದೆ. ಐಟಿ ಅಧಿಕಾರಿಗಳಿಗೆ ಕೋಟಿಗಟ್ಟಲೆ ರೂ. ನಗದು ಸಿಕ್ಕಿರುವ ಹಿನ್ನಲೆಯಲ್ಲಿ ಡಿಕೆಶಿಗೆ ಮತ್ತಷ್ಟು ಸಂಕಷ್ಟ ಎದುರಾಗಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.
ಡಿಕೆಶಿಗೆ ಸಂಬಂಧಿಸಿದ ಸುಮಾರು 10 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಗಳಾಗಿವೆ. ನಗದು ವಶಪಡಿಸಿಕೊಂಡಿರುವ ಹಿನ್ನಲೆಯಲ್ಲಿ ಈ ಪ್ರಕರಣವನ್ನು ಐಟಿ ಇಲಾಖೆ ಜಾರಿ ನಿರ್ದೇಶನಾಲಯಕ್ಕೆ ಹಸ್ತಾಂತರಿಸಿದರೆ ಡಿಕೆಶಿ ಬಂಧನವಾಗುವ ಸಾಧ್ಯತೆಯೂ ಇದೆ.
ಸದ್ಯಕ್ಕೆ ಅಂತಹ ಯಾವುದೇ ಆದೇಶವಾಗಿಲ್ಲ. ಆದರೆ ಈ ಸಂಭವವನ್ನೂ ತಳ್ಳಿ ಹಾಕುವಂತಿಲ್ಲ. ಒಂದು ವೇಳೆ ಐಟಿ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಲಿಖಿತ ಸಂಪರ್ಕ ನಡೆಸಿದರೆ, ಸಚಿವರನ್ನು ಬಂಧಿಸಿ ಮುಂದಿನ ವಿಚಾರಣೆ ನಡೆಸುವ ಸಂಭವವೂ ಇದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ