Publish Date: Thu, 10 Nov 2022 (14:02 IST)
Updated Date: Thu, 10 Nov 2022 (16:04 IST)
ಹುಬ್ಬಳ್ಳಿ : ಟಿಪ್ಪು ಒಬ್ಬ ಮತಾಂಧ, ದೇಶ ದ್ರೋಹಿಯಾಗಿದ್ದು, ಈ ಹಿನ್ನೆಲೆಯಲ್ಲಿ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸುತ್ತೇನೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕಿಡಿಕಾರಿದರು.
ಈದ್ಗಾ ಮೈದಾನದ ಬಳಿ ಪೊಲೀಸರು ವಶಕ್ಕೆ ಪಡೆಯುವ ಮುನ್ನ ಮಾಧ್ಯಮಗಳಿಗೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ಕೊಟ್ಟಿದ್ದು ತಪ್ಪು.
ಈ ವಿಚಾರದಲ್ಲಿ ಪಾಲಿಕೆ ದ್ವಂದ್ವ ನಿಲುವು ತಾಳಿರುವುದು ಸರಿಯಲ್ಲ. ರಾಜ್ಯ ಬಿಜೆಪಿ ಸರ್ಕಾರವೇ ಟಿಪ್ಪು ಜಯಂತಿ ರದ್ದು ಮಾಡಿದೆ. ಬಿಜೆಪಿ ಆಡಳಿತ ಇರುವ ಮಹಾನಗರ ಪಾಲಿಕೆ ಅನುಮತಿ ಕೊಟ್ಟಿದೆ.