ಬೆಳಗಾವಿ: ಬೆಳಗಾವಿಯಲ್ಲಿ ಚಳಿಗಾಲದ ವಿಧಾನ ಮಂಡಲ ಅಧಿವೇಶನ ಕೆಲವೇ ಕ್ಷಣಗಳಲ್ಲಿ ಆರಂಭವಾಗಿದ್ದು, ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದೆ.
ರಾಜ್ಯದಲ್ಲಿ ಬರ ಸಮಸ್ಯೆ, ಮಹಾದಾಯಿ ನದಿ ನೀರಿನ ವಿವಾದ, ಸಂಘ ಪರಿವಾರದ ಕಾರ್ಯಕರ್ತರ ಹತ್ಯೆ ಪ್ರಕರಣ, ಸಚಿವ ತನ್ವೀರ್ ಸೇಠ್ ಅಶ್ಲೀಲ ಚಿತ್ರ ವೀಕ್ಷಣೆ ಪ್ರಕರಣ ಪ್ರಸ್ತಾಪಿಸಲು ಬಿಜೆಪಿ ಸಜ್ಜಾಗಿದೆ. ಇದೇ ವೇಳೆ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ರೈತ ನಾಯಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದು ಬಿಜೆಪಿಯ ಅಸ್ತ್ರವಾಯಿತು.
ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಆರಂಭದಿಂದಲೇ ಪ್ರತಿಭಟನೆ ಆರಂಭಿಸಿದೆ. ಇದು ರೈತ ವಿರೋಧಿ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸುಗಮ ಕಲಾಪ ನಡೆಸಲು ಅನುವು ಮಾಡಿಕೊಡುವಂತೆ ಸ್ಪೀಕರ್ ಕೋಳಿವಾಡ ಪ್ರತಿಪಕ್ಷಗಳಿಗೆ ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಾ ವಿಪಕ್ಷದವರನ್ನು ಸಮಾಧಾನಿಸಲು ಯತ್ನಿಸಿದರೂ ಬಿಜೆಪಿ ಪ್ರತಿಭಟನೆ ಮುಂದುವರಿಸಿದೆ. ಕೊನೆಗೆ ಸಿದ್ಧರಾಮಯ್ಯ ಅವರನ್ನು ಬಂಧಿಸಿಲ್ಲ. ಪ್ರತಿಭಟನಾಕಾರರನ್ನು ಬಿಡುಗಡೆ ಮಾಡಲು ಸೂಚಿಸುತ್ತೇನೆ ಎಂದ ಬಳಿಕ ಕಲಾಪ ಮುಂದುವರಿಯಲು ಪ್ರತಿಪಕ್ಷಗಳು ಅನುವು ಮಾಡಿಕೊಟ್ಟಿತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ