ಬೆಂಗಳೂರು : ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಬಳಿಕ ಕಾರ್ಯಕರ್ತರು ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದ್ದು, ನಮ್ಮ ಪಕ್ಷದಲ್ಲಿಯೇ ನಮಗೆ ರಕ್ಷಣೆ ಇಲ್ಲ ಎಂದು ಹೇಳಿ ರಾಜೀನಾಮೆ ನೀಡುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಶಾಸಕ ಎಂ.ಪಿ ರೇಣುಕಾಚಾರ್ಯ ಇದೀ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ರೇಣುಕಾಚಾರ್ಯ, ಎಬಿವಿಪಿ ಯುವಕರು, ಹಿಂದೂ ಸಂಘಟನೆಗಳು, ಪಕ್ಷದ ಕಾರ್ಯಕರ್ತರಲ್ಲಿ ಕಳಕಳಿಯ ಮನವಿ ಮಾಡುತ್ತೇನೆ. ಪ್ರವೀಣ್ ಹತ್ಯೆ ಮಾಡಿದವರಿಗೆ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಪ್ರವೀಣ್ ಹತ್ಯೆ ಪ್ರಕರಣ ರಾಷ್ಟ್ರೀಯ ತನಿಖಾ ತಂಡಕ್ಕೆ ವಹಿಸಿದ್ದಾರೆ.
ಕಳೆದ ಮೂರ್ನಾಲ್ಕು ದಿನದಿಂದ ಮುಖ್ಯಮಂತ್ರಿಗಳು ನೋವಿನಲ್ಲಿದ್ದಾರೆ. ಯಾರೂ ಕೂಡ ಆತ್ಮಸ್ಥೈರ್ಯ ಕಳೆದುಕೊಳ್ಳಬೇಡಿ. ಕಾಂಗ್ರೆಸ್ ಸರ್ಕಾರ ಇದ್ದಾಗ ಮೂವತ್ತಕ್ಕೂ ಹೆಚ್ಚು ಹಿಂದುಗಳ ಹತ್ಯೆಯಾಗಿದೆ. ಕಳೆದ ಮೂರ್ನಾಲ್ಕು ದಿನದಿಂದ ಸಿಎಂ ಕಣ್ಣೀರು ಹಾಕುತ್ತಿದ್ದಾರೆ. ನಾನು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದಾಗ ನೀವು ಸರ್ಕಾರದ ಒಂದು ಭಾಗ ನೀವು ನಮ್ಮ ಜೊತೆ ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.