ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಮೇ ತಿಂಗಳಾಂತ್ಯದೊಳಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ಕೆಪಿಸಿಸಿ ಪದಾಧಿಕಾರಿಗಳ ಅಭಿಪ್ರಾಯಗಳನ್ನು ಸಂಗ್ರಹಿಸಲಾಗಿದೆ. ಸಣ್ಣಪುಟ್ಟ ವ್ಯತ್ಯಾಸ, ಅಸಮಾಧಾನಗಳಿವೆ. ಆದರೆ, ಬೇರೆ ರಾಜ್ಯಗಳಿಗೆ ಹೋಲಿಸಿದರೆ ಇಲ್ಲಿ ಕಡಿಮೆಯಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಪಕ್ಷದ ನಾಯಕರಲ್ಲಿರುವ ಅಸಮಾಧಾನವನ್ನು ಶೀಘ್ರದಲ್ಲಿಯೇ ಸರಿಪಡಿಸಲಾಗುವುದು. ಮುಂದಿನ ವಿಧಾನಸಭೆ ಚುನಾವಣೆ ಸಿದ್ದತೆ ಕುರಿತಂತೆ ಕೂಡಾ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
2018ರ ವಿಧಾನಸಭೆ ಚುನಾವಣೆ ತುಂಬಾ ಮಹತ್ವದ್ದಾಗಿದೆ. ಪಕ್ಷದ ನಾಯಕರಲ್ಲಿರುವ ಭಿನ್ನಾಭಿಪ್ರಾಯಗಳನ್ನು ಪಕ್ಷದ ವೇದಿಕೆಯಲ್ಲಿಯೇ ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ. ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಒಂದಾಗಿ ಚುನಾವಣೆ ಎದುರಿಸಬೇಕಾಗಿದೆ ಎಂದರು.
ಕೆಪಿಸಿಸಿ ಅದ್ಯಕ್ಷರನ್ನು ಬದಲಿಸಬೇಕೋ ಅಥವಾ ಬೇಡವೋ ಎನ್ನುವ ಬಗ್ಗೆ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.