Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕೌಟುಂಬಿಕ ಕಲಹಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಕೋಟೆ ತಾಲೂಕಿನ ಉಮ್ಮಲು ಗ್ರಾಮದಲ್ಲಿ ನಡೆದಿದೆ. ದೇವನಹಳ್ಳಿಯಲ್ಲಿ ವಾಸವಿರುವ 37 ವರ್ಷದ ದೀಪಾ ಎಂಬಾಕೆ ಮೃತ ದುರ್ದೈವಿ. ಕೌಟುಂಬಿಕ ಕಲಹದ ಹಿನ್ನೆಲೆ ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಸಾವನ್ನಪ್ಪಿದ್ದಾಳೆ. ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಸಕೋಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.