Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮಹಿಳೆಯ ಕಿಡ್ನ್ಯಾಪ್ ಪ್ರಕರಣ: ಭವಾನಿ ರೇವಣ್ಣಗೆ ಷರತ್ತು ಬದ್ಧ ಜಾಮೀನು

ಮಹಿಳೆಯ ಕಿಡ್ನ್ಯಾಪ್ ಪ್ರಕರಣ: ಭವಾನಿ ರೇವಣ್ಣಗೆ ಷರತ್ತು ಬದ್ಧ ಜಾಮೀನು

Sampriya

ಬೆಂಗಳೂರು , ಮಂಗಳವಾರ, 18 ಜೂನ್ 2024 (14:53 IST)
ಬೆಂಗಳೂರು: ಮಹಿಳೆಯ ಕಿಡ್ನ್ಯಾಪ್ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಭವಾನಿ ರೇವಣ್ಣಗೆ  ಕೊನೆಗೂ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಎಸ್‌. ದೀಕ್ಷಿತ್‌ ಅವರು ಭವಾನಿ ರೇವಣ್ಣಗೆ ಮೈಸೂರು ಮತ್ತು ಹಾಸನ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತು ವಿಧಿಸಿ ಜಾಮೀನು ನೀಡಿದೆ.

85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಊಟ, ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನೂ ಒಪ್ಪಲಾಗುವುದಿಲ್ಲ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ.

ಅಕ್ಕ ಬಟ್ಟೆ, ಊಟ ಕಳುಹಿಸಿದ್ದರೆಂದು ಸಂತ್ರಸ್ತೆ ಹೇಳಿಕೆಯಿದೆ ಎಂದು ಪೀಠವು ಇದೇ ಸಂದರ್ಭದಲ್ಲಿ ಉಲ್ಲೇಖಿಸಿತು.

Share this Story:

Follow Webdunia kannada

ಮುಂದಿನ ಸುದ್ದಿ

ದರ್ಶನ್ ಫಾರ್ಮ್‌ಹೌಸ್ ಮ್ಯಾನೇಜರ್ ಆತ್ಮಹತ್ಯೆಗೆ ಶರಣು