ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಪತಿ ಬೇರೆ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿರುವ ಪತ್ನಿ, ತನ್ನ ಸಹೋದರನೊಂದಿಗೆ ಆಕೆಯ ಮನೆಗೆ ತೆರಳಿದ್ದಾರೆ. ಮಹಿಳೆ ಮತ್ತು ಆತನ ಪತಿಯನ್ನು ಸಂಪೂರ್ಣವಾಗಿ ನಗ್ನಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹಲ್ಲೆಗೊಳಗಾದ ಮಹಿಳೆ ನಾನು ಯಾವುದೇ ಅನೈತಿಕ ಸಂಬಂಧ ಹೊಂದಿಲ್ಲ. ನಮ್ಮಿಬ್ಬರ ನಡುವೆ ಕೇವಲ ಹಣದ ವಹಿವಾಟಿನ ಸಬಂಧವಿತ್ತು ಎಂದು ಆರೋಪಗಳನ್ನು ತಳ್ಳಿಹಾಕಿದ್ದಾಳೆ.
ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ. ಒಂಬತ್ತು ಜನ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.