ಶಿವರಾಮ ಕಾರಂತ ಲೇಔಟ್ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಲ್ಲಿ ದಾಖಲಾಗಿರುವ 2 ಎಫ್ಐಆರ್ ರದ್ದು ಕೋರಿ ಮಾಜಿ ಸಿಎಂ ಯಡಿಯೂರಪ್ಪ ಹೈಕೋರ್ಟ್`ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಸೋಮವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ. ಈ ಮಧ್ಯೆ, ಇಂದು ವಿಚಾರಣೆಗೆ ಹಾಜರಾಗುವಂತೆ ಎಸಿಬಿಯಿಂದ ಮಾಜಿ ಸಿಎಂ ಯಡಿಯೂರಪ್ಪಗ ಸಮನ್ಸ್ ಜಾರಿಯಾಗಿತ್ತು. ಆದರೆ, ಯಡಿಯೂರಪ್ಪ ಪರ ಎಸಿಬಿ ಕಚೇರಿಗೆ ತೆರಳಿದ್ದ ವಕೀಲರು ಸಮಯ ಕೇಳಿ ಮನವಿ ಸಲ್ಲಿಸಿದ್ದಾರೆ.
ಇತ್ತ, ನಮ್ಮ ರಾಜಕೀಯ ಹೋರಾಟವನ್ನ ಹಣಿಯಲು ಸಿಎಂ ಸಿದ್ದರಾಮಯ್ಯ ನನ್ನ ವಿರುದ್ಧ ಎಸಿಬಿಯಲ್ಲಿ ದೂರು ದಾಖಲಿಸಿದ್ದಾರೆ ಎಂದು ನಿನ್ನೆ ಯಡಿಯೂರಪ್ಪ ಆರೋಪಿಸಿದ್ದರು. ಈ ಆರೋಪಕ್ಕೆ ಇಂಬು ನಿಡುವಂತೆ ಸರ್ಕಾರಿ ಅಧಿಕಾರಿಯೊಬ್ಬರು ರಾಜ್ಯಪಾಲರಿಗೆ ದೂರು ನಿಡಿದ್ದು, ಎಸಿಬಿಯಿಂದಲೇ ಒತ್ತಡ ಬಂದಿತ್ತು ಎಂದು ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ