ಶಿವರಾಮ ಕಾರಂತ ಲೇಔಟ್ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ನಾಳೆ ಹಾಜರಾಗುವಂತೆ ನೀಡಿದ್ದ ಸಮನ್ಸ್ ಅನ್ನ ಎಸಿಬಿ ಹಿಂಪಡೆದಿದೆ.
ಎಸಿಬಿಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೈಕೊರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್ ಆಗಸ್ಟ್ 28ರವರೆಗೆ ವಿಚಾರಣೆ ಮುಂದೂಡಿದೆ. ವಿಚಾರಣೆ ಮುಗಿಯುವವರೆಗೂ ಬಂಧಿಸದಂತೆ ಹೈಕೋರ್ಟ್ ತಾಕೀತು ಮಾಡಿದ ಹಿನ್ನೆಲೆಯಲ್ಲಿ ಎಸಿಬಿ ಸಮನ್ಸ್ ವಾಪಸ್ ಪಡೆದಿದೆ.
ಡಾ. ಶಿವರಾಮ ಕಾರಂತ ಬಡಾವಣೆಗೆ 257 ಎಕರೆ ಭೂಮಿ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಗೆ ಅಯ್ಯಪ್ಪ ಎಂಬುವವರು ದೂರು ನೀಡಿದ್ದರು. ಈ ದೂರಿನನ್ವಯ ಎಸಿಬಿ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದರು. ಎಫೈಆರ್ ದಾಖಲಾದ ಬಳಿಕ ಎಸಿಬಿ ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪನವರಿಗೆ ಸಮನ್ಸ್ ನೀಡಿತ್ತು. ಇದು ರಾಜಕೀಯ ಜಿದ್ದಾಜಿದ್ದಿಗೂ ಕಾರಣವಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ