ಕನ್ನಡ ಚಿತ್ರರಂಗದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಜೀವನ ಚರಿತ್ರೆ ಕುರಿತ ಚಿತ್ರ ನಿರ್ಮಾಣವಾಗುತ್ತಿರುವ ಸುದ್ದಿ ನಿಮಗೆಲ್ಲ ಗೊತ್ತೇ ಇದೆ. ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಚಿತ್ರ ನಿರ್ದೇಶಿಸುತ್ತಿದ್ದಾರೆ. ಇದೀಗ, ಮಾಜಿ ಕಥಾಧರಿತ ಸಿನಿಮಾ ಮಾಡುವ ಸಿದ್ಧತೆ ನಡೆದಿದೆಯಂತೆ.
ಯಡಿಯೂರಪ್ಪ ಸಿನಿಮಾ ಮಾಡುವ ವಿಚಾರ ಮಾತುಕತೆ ಹಂತದಲ್ಲಿದ್ದು, ಬಿಜೆಪಿ ನಾಯಕ ರುದ್ರೇಶ್ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದು, ಕರ್ಪೋರೇಟರ್ ಮರಿಸ್ವಾಮಿ ಸಹ ನಿರ್ಮಾಣ ಕಾರ್ಯಕ್ಕೆ ನೆರವಾಗಲಿದ್ದಾರೆ ಎಂದು ಸ್ಥಳೀಯ ಸುದ್ದಿ ಪತ್ರಿಕೆಯೊಂದು ವರದಿ ಮಾಡಿದೆ.
ರುದ್ರೇಶ್ ಈಗಾಗಲೇ ಯಡಿಯೂರಪ್ಪನವರ ಪಾತ್ರ ನಿರ್ವಹಿಸಲು ನಟ ಉಪೇಂದ್ರ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕಲಬುರಗಿಯಲ್ಲಿ ಪ್ರತಿಕ್ರಿಯಿಸಿರುವ ಯಡಿಯೂರಪ್ಪ, ನನ್ನ ಕುತಾದ ಸಿನಿಮಾ ಮಾಡುವ ಅಗತ್ಯವಿಲ್ಲ. ಸಿನಿಮಾ ಮಾಡಲು ಯಾರಿಗೂ ಅನುಮತಿ ನೀಡಿಲ್ಲ ಎಂದಿದ್ದಾರೆ.
ಎಲ್ಲವೂ ಅಂದುಕೊಂಡಂತೆ ಆದರೆ ಮುಂದಿನ ವಿಧಾನಸಭೆ ಚುನಾವಣೆ ಹೊತ್ತಿಗೆ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಚಿತ್ರಗಳು ತೆರೆಗೆ ಅಪ್ಪಳಿಸುವ ಸಾಧ್ಯತೆ ಇದೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..