ಬೆಂಗಳೂರು : ಯಾಸ್ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.
ಮೇ 2ರಂದು ಬೀಸಲಿರುವ ಯಾಸ್ ಚಂಡಮಾರುತ ಒಡಿಶಾ ಮತ್ತು ಪಶ್ಚಿಮಬಂಗಾಳ ಕರಾವಳಿಯನ್ನು ಹಾದುಹೋಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಸೂಚನೆ ನೀಡಿದೆ. ಹಾಗಾಗಿ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ . ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.