Daily Horoscope

ಯಾವಾಗ್ಲೂ ಹೈಕಮಾಂಡ್ ಹೈಕಮಾಂಡೇ, ಡಿಕೆಶಿಗೆ ಯತೀಂದ್ರ ಸಿದ್ದರಾಮಯ್ಯ ಕೌಂಟರ್

Krishnaveni K
ಶನಿವಾರ, 7 ಫೆಬ್ರವರಿ 2026 (13:06 IST)
ಬೆಂಗಳೂರು: ಯತೀಂದ್ರ ಅವರೇ ನಮ್ಮ ಹೈಕಮಾಂಡ್ ಎಂದು ವ್ಯಂಗ್ಯ ಮಾಡಿದ್ದ ಡಿಕೆ ಶಿವಕುಮಾರ್ ಗೆ ಪ್ರತಿಕ್ರಿಯಿಸಿದ್ದಾರೆ. ಯಾವಾಗ್ಲೂ ಹೈಕಮಾಂಡ್ ಹೈಕಮಾಂಡೇ ಎಂದಿದ್ದಾರೆ.

ಯತೀಂದ್ರ ನಿನ್ನೆ ಮಾಧ್ಯಮಗಳ ಮುಂದೆ ಸಿದ್ದರಾಮಯ್ಯನವರೇ ಐದು ವರ್ಷವೂ ಮುಂದುವರಿಯುತ್ತಾರೆ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಡಿಕೆ ಶಿವಕುಮಾರ್, ಯತೀಂದ್ರ ಅವರೇ ನಮ್ಮ ಹೈಕಮಾಂಡ್. ಅವರು ಹೇಳಿದ್ಮೇಲೆ ಮುಗೀತು ಎಂದು ವ್ಯಂಗ್ಯ ಮಾಡಿದ್ದರು.

ಡಿಕೆಶಿ ಹೇಳಿಕೆಗೆ ಇಂದು ಪ್ರತಿಕ್ರಿಯಿಸಿರುವ ಯತೀಂದ್ರ, ‘ಯಾವತ್ತಿದ್ರೂ ಹೈಕಮಾಂಡ್ ಹೈಕಮಾಂಡೇ. ಹೈಕಮಾಂಡ್ ಅವರ ತೀರ್ಮಾನಕ್ಕೇ ಎಲ್ಲರೂ ಬದ್ಧರಾಗಿರುತ್ತಾರೆ. ಅವರು ಹೇಳಿದ್ದನ್ನೇ ನಾನೂ ಹೇಳಿದ್ದು. ಹೈಕಮಾಂಡ್ ನವರು ಸದ್ಯಕ್ಕೆ ಏನೂ ಹೇಳಿಲ್ಲ. ಅಲ್ಲಿಯವರೆಗೆ ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ.

ಎಲ್ಲಾ ಪಕ್ಷಗಳಲ್ಲೂ ಮುಖ್ಯಮಂತ್ರಿಗಳ ಆಕಾಂಕ್ಷಿಗಳು, ಅರ್ಹತೆಯಿರುವವರು ಇರುತ್ತಾರೆ. ಆದರೆ ಎಲ್ಲದಕ್ಕೂ ಹೈಕಮಾಂಡ್ ನವರು ಏನೂ ಹೇಳಿಲ್ಲ. ಹಾಗಾಗಿ ಸಿದ್ದರಾಮಯ್ಯನವೇ ಮುಂದುವರಿಯುತ್ತಾರೆ. ಹೈಕಮಾಂಡ್ ನವರು ಏನಾದ್ರೂ ಹೇಳಿದ್ದಾರಾ? ಹಾಗಾಗಿ ಅವರೇ ಮುಂದುವರಿಯುತ್ತಾರೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments