ಬಿಜೆಪಿ ಹಿಂದುಳಿದ ಮೋರ್ಚಾ ಪ್ರಭಾರಿಯಾಗಿ ಕೆ.ಎಸ್.ಈಶ್ವರಪ್ಪ ನೇಮಕವಾಗಿರುವುದು ಸಂತಸ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಕೆ.ಎಸ್.ಈಶ್ವರಪ್ಪ ಹಿಂದುಳಿದ ಮೋರ್ಚಾಕ್ಕೆ ಪ್ರಭಾರಿಯಾಗಿ ಆಯ್ಕೆಯಾಗಿದ್ದರಿಂದ ಆನೆಬಲ ಬಂದಂತಾಗಿದೆ. ಅವರ ನೇತೃತ್ವದಲ್ಲಿ ಎರಡು ಬೃಹತ್ ಸಮಾವೇಶಗಳನ್ನು ಆಯೋಜಿಸಲು ಪಕ್ಷ ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ಪಕ್ಷದಲ್ಲಿರುವ ಹಿಂದುಳಿದ ಮೋರ್ಚಾ ಅಡಿಯಲ್ಲಿ ಸಮಾವೇಶಗಳನ್ನು ಹಮ್ಮಿಕೊಳ್ಳಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಬ್ರಿಗೇಡ್ ಕುರಿತಂತೆ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಧ್ಯೆ ಬಿಕ್ಕಟ್ಟು ಅಂತ್ಯವಾಗುವ ಲಕ್ಷಣಗಳು ಗೋಚರಿಸುತ್ತಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.