ಕೊನೆಗೂ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹಾಕಿದ ಗಾಳಕ್ಕೆ ಯಡಿಯೂರಪ್ಪ ಸಿಲುಕಿದ್ದಾರೆ.
ಇಂದು ನಡೆದ ಯಡಿಯೂರಪ್ಪ-ಈಶ್ವರಪ್ಪ ಚರ್ಚೆಯಲ್ಲಿ ಕೆಲ ಜಿಲ್ಲಾಧ್ಯಕ್ಷರುಗಳನ್ನು ಬದಲಾವಣೆ ಮಾಡಲು ಯಡಿಯೂರಪ್ಪ ಒಪ್ಪಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು ಸಂಜೆ ಪರಿಷ್ಕ್ರತ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಯಡಿಯೂರಪ್ಪ ಪಕ್ಷದ ಪದಾಧಿಕಾರಿಗಳ ನೇಮಕದಲ್ಲಿ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸುವುದಿಲ್ಲ ಎಂದು ಈಶ್ವರಪ್ಪ ಈ ಹಿಂದೆ ಗಂಭೀರ ಆರೋಪ ಮಾಡಿದ್ದರು.
ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಯಡಿಯೂರಪ್ಪ-ಈಶ್ವರಪ್ಪ ಮಧ್ಯೆ ಸಂಧಾನವೇರ್ಪಡಿಸಿ ಕೋರ್ ಕಮಿಟಿಯಲ್ಲಿ ಚರ್ಚಿಸಿದ ನಂತರ ಪದಾಧಿಕಾರಿಗಳ ನೇಮಕ ಮಾಡುವಂತೆ ಬಿಎಸ್‌ವೈಗೆ ಸಲಹೆ ನೀಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.