ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತು ನಾನು ಹಿಂದೂಸ್ತಾನ್, ಪಾಕಿಸ್ತಾನ್ ಅಲ್ಲ. ನಾವಿಬ್ಬರು ಒಟ್ಟಾಗಿದ್ದೇವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ರಾಜ್ಯ ಕಾರ್ಯಕಾರಿಣಿಯಲ್ಲಿ ನಾವಿಬ್ಬರು ಜತೆಯಾಗಿದ್ದೇವೆ. ನಮ್ಮಲ್ಲಿ ಕೆಲವು ಗೊಂದಲಗಳಿವೆ. ಆದರೆ, ಯಾವುದೇ ವೈಮನಸ್ಸಿಲ್ಲ ಎಂದು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಬರಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ.ರೈತರ ಸಾಲ ಮನ್ನಾ ಮಾಡಲು ಮುಂದಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವಿವಾದದಿಂದ ಇಬ್ಬರು ನಾಯಕರು ನಡುವೆ ಭುಗಿಲೆದ್ದಿರುವ ಭಿನ್ನಮತ ಶಮನಕ್ಕೆ ಇದೀಗ ಬಿಜೆಪಿ ನಾಯಕರೂ ಮುಂದಾಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.