ಅರಣ್ಯ ಖಾತೆ ಸಚಿವ ರಮಾನಾಥ್ ರೈಗೆ ಗೃಹ ಸಚಿವ ಖಾತೆ ನೀಡಿದಲ್ಲಿ ಹೋರಾಟ ನಡೆಸುವುದಾಗಿ ಘೋಷಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಇಂದು ಹೋರಾಟದ ರೂಪರೇಷೆ ರೂಪಿಸಿಲು ಬಿಜೆಪಿ ನಾಯಕರು ತುರ್ತುಸಭೆ ಕರೆದಿದ್ದಾರೆ.
ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನಾಯಕರು ತುರ್ತು ಸಭೆಯನ್ನು ಸಂಜೆ ಐದು ಗಂಟೆಗೆ ಕರೆದಿದ್ದಾರೆ.
ಸಭೆಯಲ್ಲಿ ಬಿಜೆಪಿಯ ಪ್ರಮುಖ ನಾಯಕರು ಭಾಗಿಯಾಗಲಿದ್ದು, ಮುಂದೆ ಯಾವ ರೀತಿ ಹೋರಾಟ ಹಮ್ಮಿಕೊಳ್ಳಬೇಕು ಎನ್ನುವ ಬಗ್ಗೆ ಸಭೆ ನಿರ್ಧರಿಸಲಿದೆ ಎನ್ನಲಾಗಿದೆ.
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಶಾಲೆಗೆ ಸರಕಾರ ಅನುದಾನ ಕಡಿತಗೊಳಿಸುವಲ್ಲಿ ಸಚಿವ ರಮಾನಾಥ್ ರೈ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ.
ರಾಜ್ಯ ಸರಕಾರದ ವಿರುದ್ಧ ತೀವ್ರ ಹೋರಾಟ ನಡೆಸುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರಿಗೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಇದೀಗ ಅಮಿತ್ ಶಾ ಆದೇಶದಂತೆ ಉಗ್ರಸ್ವರೂಪದ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.