ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದ್ದಾರೆ.
ಯಡಿಯೂರಪ್ಪ ಆಹ್ವಾನಕ್ಕೆ ಪ್ರತಿಕ್ರಿಯೆ ನೀಡಿರುವ ಅಮಿತ್ ಶಾ, ಮೇ ಅಥವಾ ಜೂನ್ ತಿಂಗಳಲ್ಲಿ ರಾಜ್ಯಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
ಅಮಿತ್ ಶಾ ಅವರನ್ನು ರಾಜ್ಯಕ್ಕೆ ಕರೆಸಿಕೊಂಡು ಬಿಜೆಪಿ ನಾಯಕರಿಗೆ ಸಲಹೆ ಸೂಚನೆ ಕೊಡಿಸಲು ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಉಪಚುನಾವಣೆಯ ಸೋಲಿನಿಂದ ಸ್ವಲ್ಪ ಮಟ್ಟಿಗೆ ಆಧೀರರಾಗಿರುವ ಬಿಜೆಪಿ ನಾಯಕರಿಗೆ ಹೊಸ ಶಕ್ತಿಯನ್ನು ತಂದುಕೊಡಲು ಬಿಎಸ್ವೈ ಪ್ಲ್ಯಾನ್ ರೂಪಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ವರ್ಷದ ಆರಂಭದಲ್ಲಿ ವಿಧಾನಸಭೆಗೆ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.