Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬಿಬಿಎಂಪಿಯಲ್ಲಿ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಅಡ್ಡಿಯಿಲ್ಲ: ಆರ್.ಅಶೋಕ್

ಬಿಬಿಎಂಪಿಯಲ್ಲಿ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಅಡ್ಡಿಯಿಲ್ಲ: ಆರ್.ಅಶೋಕ್
ಬೆಂಗಳೂರು , ಗುರುವಾರ, 1 ಸೆಪ್ಟಂಬರ್ 2016 (15:51 IST)
ಬಿಬಿಎಂಪಿಯಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲು ಅಡ್ಡಿಯಾಗುವುದಿಲ್ಲ. ಆದರೆ. ಹಿಂದೆ ನಡೆದ ತಪ್ಪುಗಳನ್ನು ಮರಕಳಿಸದಂತೆ ನೋಡಿಕೊಳ್ಳಲು ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಹೇಳಿದ್ದಾರೆ.
 
ಬೆಂಗಳೂರಿನಲ್ಲಿ ಮಾಜಿ ಡಿಸಿಎಂ ಆರ್.ಅಶೋಕ್ ಮಾತನಾಡಿ, ಬಿಜೆಪಿ ಪಕ್ಷದ ಮುಖಂಡರೊಡನೆ ಚರ್ಚಿಸಿದ ನಂತರ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿಯವರೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
 
ಜೆಡಿಎಸ್ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡರೊಂದಿಗೆ ಮೊದಲ ಸುತ್ತಿನ ಮಾತುಕತೆ ಫಲಪ್ರದವಾಗಿದ್ದು, ಎರಡನೇ ಸುತ್ತಿನ ಮಾತುಕತೆಯಲ್ಲಿ ಬಿಬಿಎಂಪಿ ಚುನಾವಣೆ ಕುರಿತಂತೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
 
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೆಪ್ಟೆಂಬರ್ 4 ರಂದು ಜೆಡಿಎಸ್ ಬಿಬಿಎಂಪಿ ಸದಸ್ಯರ ಸಭೆ ಕರೆದಿದ್ದು, ಮೇಯರ್ ಮತ್ತು ಉಪಮೇಯರ್ ಯಾರಾಗಬೇಕು ಎನ್ನುವ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
 
ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಬಿಎಂಪಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟ ಯಶಸ್ವಿಯಾಗಿ ಒಂದು ವರ್ಷ ಪೂರ್ಣಗೊಳಿಸಿದ್ದು, ಉಭಯ ಪಕ್ಷಗಳ ನಡುವೆ ಯಾವುದೇ ಬಿಕ್ಕಟ್ಟಿಲ್ಲ. ಪೂರ್ಮಾವಧಿಗೆ ಮೈತ್ರಿ ಮುಂದುವರಿಯಲಿದೆ ಎಂದು ಹೇಳಿಕೆ ನೀಡಿರುವುದನ್ನು ಸ್ಮರಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಸೋನಿಯಾರನ್ನು ಮೆಚ್ಚಿಸಲು ರಮ್ಯ ಆರೆಸ್ಸೆಸ್ ವಿರುದ್ಧ ಹೇಳಿಕೆ: ಈಶ್ವರಪ್ಪ