Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಮ್ಮ ಲೀಡರ್, ಮುಂದಿನ ಮುಖ್ಯಮಂತ್ರಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಯಡಿಯೂರಪ್ಪ ಮತ್ತು ನನ್ನ ಮಧ್ಯೆ ಸಣ್ಣಪುಟ್ಟ ಮಟ್ಟದ ಗೊಂದಲಗಳಿವೆ. ಗೊಂದಲಗಳು ಚುನಾವಣೆಯ ಮುನ್ನ ಬಗೆಹರಿಯಲಿವೆ. ಇಲ್ಲವೇ ಚುನಾವಣೆ ನಂತರ ಬಗೆಹರಿಯಲಿವೆ ಎಂದು ತಿಳಿಸಿದ್ದಾರೆ.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಬ್ರಿಗೇಡ್‌ಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ದಲಿತ, ಹಿಂದುಳಿದವರ, ಶೋಷಿತರ ಏಳಿಗೆಗಾಗಿ ಶ್ರಮಿಸುತ್ತದೆ ಎಂದರು.
ಮುಂಬರುವ ವಿಧಾನಸಭೆ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ. ಚುನಾವಣೆಯಲ್ಲಿ ಜಯಭೇರಿ ಬಾರಿಸಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುತ್ತೇವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.