ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಾರದೇ ಇರುವುದಕ್ಕೆ ಯಡಿಯೂರಪ್ಪನವರೇ ಕಾರಣ. ಆದ್ದರಿಂದ ಬಿ.ಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಅಧ್ಯಕ್ಷ ಗಾಧಿಯಿಂದ ಕೆಳಗಿಳಿಸುವಂತೆ ಪಕ್ಷದ ಕಾರ್ಯಕರ್ತರೊಬ್ಬರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.
ಭಾಲ್ಕಿಯ ಬಿಜೆಪಿ ಕಾರ್ಯಕರ್ತ ಭರತ್ ಖಂಡ್ರೆ ಅವರು ಈ ಪತ್ರ ಬರೆದಿದ್ದು, ರಾಜ್ಯದಲ್ಲಿ ಅಮಿತ್ ಶಾ ಹಾಕಿದ್ದ ಮಿಷನ್ 150 ಸಫಲವಾಗುವ ಎಲ್ಲ ಸಾಧ್ಯತೆಗಳಿದ್ದವು. ಆದರೆ ಕೆಜೆಪಿಯಿಂದ ಬಂದವರಿಗೆ ಟಿಕೆಟ್ ನೀಡಿದ್ದರಿಂದ ಬಿಜೆಪಿ ಅಧಿಕಾರದಿಂದ ವಂಚಿತವಾಯಿತು. ಅಲ್ಲದೇ ಜಿಲ್ಲೆಯಲ್ಲಿ ಕಮಲ ಪಕ್ಷ ಸಂಪೂರ್ಣ ನೆಲಕಚ್ಚಿದೆ ಎಂದು ಅವರು ಬಿ.ಎಸ್ ಯಡಿಯೂರಪ್ಪ ವಿರುದ್ಧ ಆರೋಪಿಸಿದ್ದಾರೆ.
ಜಿಲ್ಲೆಯಲ್ಲಿ 5 ಸಾಮಾನ್ಯ ಕ್ಷೇತ್ರಗಳಿದ್ದು, ವಿಧಾನಸಭಾ ಚುನಾವಣೆಯಲ್ಲಿ ಒಂದು ಸೀಟು ಗೆಲ್ಲಲು ಆಗಿಲ್ಲ. ಪ್ರಧಾನಿ ಮೋದಿ ಯೋಗಿ ಆದಿತ್ಯನಾಥ್ ಬಂದರೂ ಅದು ಫಲಿಸಿಲ್ಲ. ಜಿಲ್ಲೆಯಲ್ಲಿ ಮೋದಿ ಅಭಿಮಾನಿಗಳ ಸಂಖ್ಯೆ ಜಾಸ್ತಿ ಇದ್ದರೂ ಯಡಿಯೂರಪ್ಪನವರ ಬಂಟರಿಂದಲೇ ಪಕ್ಷ ಪತನದತ್ತ ಸಾಗುತ್ತಿದೆ. ಹೀಗಾಗಿ ಕೂಡಲೇ ಬಿಎಸ್‍ವೈ ಅವರನ್ನು ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.