ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಕಿಡ್ನಾಪ್ ಕೇಸ್‌ನಲ್ಲಿ ಸಂತೋಷ್ ಪಾತ್ರವಿಲ್ಲವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪತ್ರ ಬರೆದಿದ್ದು ನಿಜ. ಆದರೆ, ಅವರು ನನ್ನನ್ನು ಸಂಪರ್ಕಿಸಿಲ್ಲ ಎಂದು ಪೂರ್ವ ವಿಭಾಗದ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಹೇಳಿದ್ದಾರೆ.
ಯಡಿಯೂರಪ್ಪ ತಮ್ಮನ್ನು ಸಂಪರ್ಕಿಸಿದ್ದಾರೆ ಎನ್ನುವ ವರದಿಗಳಲ್ಲಿ ಸತ್ಯಾಂಶವಿಲ್ಲ. ವಿನಯ್ ಅಪಹರಣ ಪ್ರಕರಣ ನನ್ನ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ವಿನಯ್ ಅಪಹರಣ ಪ್ರಕರಣದಲ್ಲಿ ಆರೋಪಿಯಾಗಿರುವ ಸಂತೋಷ್‌ನನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಇಂದು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿ ಸಂತೋಷ್‌ಗೆ ಜಾಮೀನು ನೀಡಿದಲ್ಲಿ ಸಾಕ್ಷಿಗಳನ್ನು ನಾಶಪಡಿಸುವ ಸಾಧ್ಯತೆಗಳಿರುವುದರಿಂದ ಅವರಿಗೆ ಜಾಮೀನು ನೀಡುವುದಕ್ಕೆ ನಮ್ಮ ಆಕ್ಷೇಪವಿದೆ ಎಂದು ಎಸಿಪಿ ಬಡಿಗೇರ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.