Publish Date: Wed, 29 Jul 2020 (14:44 IST)
Updated Date: Wed, 29 Jul 2020 (14:47 IST)
ರಾಜ್ಯ ಸರಕಾರಕ್ಕೆ ಮಾಜಿ ಪ್ರಧಾನಿ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಸರ್ಕಾರದ ನಡೆಯ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಭೂಸುಧಾರಣೆ, ಎಪಿಎಂಸಿ ಹಾಗೂ ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿದೆ.
ಸುಗ್ರಿವಾಜ್ಞೆಯನ್ನು ಸರ್ಕಾರ ಹಿಂಪಡಿಯಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಎಚ್.ಡಿ. ದೇವೇಗೌಡ ಎಚ್ಚರಿಕೆ ನೀಡಿದ್ದಾರೆ.
ಸರ್ಕಾರ ರೈತರನ್ನು ಮತ್ತು ಕಾರ್ಮಿಕರನ್ನು ಬೀದಿಪಾಲು ಮಾಡುತ್ತಿದೆ. ಈ ವಿಷಯ ಕುರಿತಂತೆ 3 ಸಲ ಸರ್ಕಾರಕ್ಕೆ ಪತ್ರ ಬರೆದಿರುವಾಗಿ ತಿಳಿಸಿದ್ದಾರೆ.