Publish Date: Sat, 10 Dec 2022 (11:54 IST)
Updated Date: Sat, 10 Dec 2022 (07:55 IST)
ಬೆಂಗಳೂರು : ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಗುಜರಾತಿನ ಅಹಮದಾಬಾದ್ ತೆರಳಲಿದ್ದಾರೆ.
ಬಿಜೆಪಿ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರಾಗಿರುವ ಬಿಎಸ್ವೈ ಅವರನ್ನು ಮುಖ್ಯಮಂತ್ರಿ ಆಯ್ಕೆ ಸಂಬಂಧ ಬಿಜೆಪಿ ಹೈಕಮಾಂಡ್ ವೀಕ್ಷಕರಾಗಿ ನಿಯೋಜನೆ ಮಾಡಿದೆ.
ಡಿ. 2 ಸೋಮವಾರದಂದು ಭೂಪೇಂದ್ರ ಪಟೇಲ್ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು ಎರಡನೇ ಬಾರಿ ಅಧಿಕಾರ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಸೇರಿ ಹಲವು ರಾಜ್ಯ ನಾಯಕರೂ ಭಾಗಿಯಾಗಲಿದ್ದಾರೆ.
Ramya kosira
Publish Date: Sat, 10 Dec 2022 (11:54 IST)
Updated Date: Sat, 10 Dec 2022 (07:55 IST)