ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಿಎಂ ಬಿ.ಎಸ್.ಯಡಿಯೂರಪ್ಪ ನೆರೆಪೀಡಿತ ಪ್ರದೇಶಗಳಾದ ಬೆಳಗಾವಿ, ಅಥಣಿ,ಬಾಗಲಕೋಟೆ, ವಿಜಯಪುರ, ಯಾದಗಿರಿಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಇಂದು ಸಂಜೆ 4ಕ್ಕೆ ಸಿಎಂ ಬೆಳಗಾವಿಗೆ ತೆರಳಲಿದ್ದು, ಸಂಜೆ 4 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ಪ್ರವಾಹದ ಪರಿಹಾರ ಹಂಚಿಕೆ ಕುರಿತು ಸಿಎಂ ಬಿಎಸ್ವೈ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.
ಅಲ್ಲದೇ ಈ ವೇಳೆ ಸಿಎಂ ಮುಜುಗರ ತಪ್ಪಿಸಲು ಜಿಲ್ಲಾಡಳಿತದಿಂದ ಪರಿಹಾರ ಹಂಚಿಕೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ಬೆಳಗಾವಿ ಜಿಲ್ಲೆಗೆ ರಾಜ್ಯ ಸರ್ಕಾರದಿಂದ 867 ಕೋಟಿ ಹಣ ಬಿಡುಗಡೆ ಆಗಿದೆ. ಪ್ರವಾಹಕ್ಕೆ ತುತ್ತಾದ ಪ್ರದೇಶಗಳಿಗೆ ಜಿಲ್ಲಾಡಳಿತದಿಂದ ಪರಿಹಾರ ವಿತರಣೆ ಮಾಡಲಾಗುತ್ತದೆ. ಈ ಬಗ್ಗೆ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ ಎನ್ನಲಾಗಿದೆ.