Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಚುನಾವಣೆ ಮುಗಿಯುವ ಮೊದಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯ ಕನಸಿನಲ್ಲಿ ತೇಲಾಡುತ್ತಿದ್ದಾರೆ.
ಪದೇ ಪದೇ ಕೆಲವೇ ದಿನಗಳಲ್ಲಿ ತಾನೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಮೊನ್ನೆಯಷ್ಟೇ ಪ್ರಧಾನಿ ಮೋದಿ ಭವಿಷ್ಯ ವಾಣಿಯಂತೆ ಮೇ 17 ಅಥವಾ 18 ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ ಎಂದು ಯಡಿಯೂರಪ್ಪ ಹೇಳಿಕೊಂಡಿದ್ದಾರೆ.
ಇದೀಗ ಮತ್ತೆ ಅದೇ ಮಾತನ್ನು ಪುನರುಚ್ಚರಿಸಿದ್ದಾರೆ. ಇಂದಿನಿಂದ 9 ದಿನಗಳೊಳಗಾಗಿ ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದೇನೆ ಎಂದು ಯಡಿಯೂರಪ್ಪ ಮತ್ತೆ ಹೇಳಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.