Publish Date: Tue, 07 Jan 2020 (16:05 IST)
Updated Date: Tue, 07 Jan 2020 (16:08 IST)
ಯೋಗ ಸ್ಪರ್ಶ ಪ್ರತಿಷ್ಠಾನದ ವತಿಯಿಂದ ಯೋಗ ಸಂಗಮ – 2020 ಆಯೋಜಿಸಲಾಗಿದೆ.
ನಾಲ್ಕು ದಿನಗಳ ಉಚಿತ ವಸತಿ ಯೋಗ ಪ್ರಶಿಕ್ಷಣ ಶಿಬಿರವನ್ನು ಜನೇವರಿ 9 ರಿಂದ 12 ರ ವರೆಗೆ ಹುಬ್ಬಳ್ಳಿಯ ವಿವಿಧ ಕಡೆಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ಹೀಗಂತ ಯೋಗ ಸ್ಪರ್ಶ ಪ್ರತಿಷ್ಠಾನದ ಅಧ್ಯಕ್ಷ ದಯಾನಂದ ಮಗಜಿಕೊಂಡಿ, ಜೆಡಿಎಸ್ ಮುಖಂಡ ರಾಜಣ್ಣ ಕೊರವಿ ತಿಳಿಸಿದ್ದಾರೆ.
ಯೋಗ ಸ್ಪರ್ಶ ಪ್ರತಿಷ್ಠಾನ, ಹುಬ್ಬಳ್ಳಿಯ ಎಸ್ ಪಿ ವಾಯ್ ಎಸ್ ಎಸ್ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸಹಯೋಗದಲ್ಲಿ ಶಿಬಿರ ನಡೆಯಲಿದೆ.
ಐದು ಸಾವಿರಕ್ಕೂ ಹೆಚ್ಚು ಜನರಿಗೆ 55 ವಿಭಾಗಗಳಲ್ಲಿ ಯೋಗ ಶಿಕ್ಷಣವನ್ನು ನೀಡಲಾಗುತ್ತದೆ ಎಂದಿದ್ದಾರೆ.