ಹುಬ್ಬಳ್ಳಿ: ಉತ್ತರ ಪ್ರದೇಶದ ಸಿ.ಎಂ. ಯೋಗಿ ಆದಿತ್ಯನಾಥ್ ಅವರು ಕರ್ನಾಟಕವನ್ನು ಕಾಂಗ್ರೆಸ್ ಮುಕ್ತವನ್ನಾಗಿ ಮಾಡಬೇಕು ಎಂದು ಹುಬ್ಬಳ್ಳಿ ನೆಹರೂ ಮೈದಾನದಲ್ಲಿ ಆಯೋಜಿಸಿರುವ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಟಿಪ್ಪುವನ್ನು ಪೂಜಿಸುತ್ತಿದ್ದು ಹನುಮಾನ್ ಯಾತ್ರೆಗೆ ತಡೆಯೊಡ್ಡುತ್ತಿದೆ ಎಂದು ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಧರ್ಮ, ಜಾತಿ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದೆ. ಹಿಂದೂಗಳ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ. ಹಾಗೆ ಮುಂದಿನ ಚುನಾವಣೆಯಲ್ಲಿ ಗುಜರಾತ್ ಜನತೆ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಹಾಗೆ ನೀವೂ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು ಎಂದು ಕರೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ